ಗೋವಾ ವಿಧಾನಸಭೆಯಲ್ಲಿಂದು ಅಲ್ಲಿನ ನೂತನ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಂದ ಇಂದು ವಿಶ್ವಾಸಮತ ಯಾಚನೆ

ಗೋವಾದ ನೂತನ ಮುಖ್ಯಮಂತ್ರಿಯಾಗಿ ನಿನ್ನೆ ಅಧಿಕಾರ ಸ್ವೀಕರಿಸಿದ ಪ್ರಮೋದ್ ಸಾವಂತ್, ಇಂದು ಅಲ್ಲಿನ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ. ಅಲ್ಲಿನ ರಾಜ್ಯಪಾಲರಾದ ಮೃದುಲಾ ಸಿನ್ಹಾ ಇಂದು ಬೆಳಗ್ಗೆ ೧೧.೩೦ಕ್ಕೆ ವಿಧಾನಸಭೆಯ ವಿಶೇಷ ಅಧಿವೇಶನ ಕರೆದಿದ್ದಾರೆ. ಮನೋಹರ್ ಪರಿಕ್ಕರ್ ಅವರ ನಿಧನದಿಂದಾಗಿ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮೋದ್ ಸಾವಂತ್ ನೇಮಕಗೊಂಡಿದ್ದು, ೧೧ ಸಂಪುಟ ಸಚಿವರು ಸೋಮವಾರ ರಾತ್ರಿ ಪ್ರಮಾಣವಚನ ಸ್ವೀಕರಿಸಿದ್ದರು.