ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ೨೦೧೭ರಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಮೇಲಿನ ಭಯೋತ್ಪಾದನಾ ದಾಳಿ ಪ್ರಕರಣ; ರಾಷ್ಟ್ರೀಯ ತನಿಖಾ ಏಜೆನ್ಸಿಯಿಂದ ೫ನೇ ಆರೋಪಿ ಬಂಧನ

ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಲೇಥ್‌ಪೊರಾ ಗ್ರಾಮದಲ್ಲಿ ೨೦೧೭ರಲ್ಲಿ ಕೇಂದ್ರೀಯ ಮೀಸಲು ಪಡೆ ಸಿಆರ್‌ಪಿಎಫ್ ಮೇಲೆ ಭಯೋತ್ಪಾದನಾ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಏಜೆನ್ಸಿ- ಎನ್‌ಐಎ ೫ನೇ ಆರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಇರ್ಷದ್ ಅಹಮ್ಮದ್ ರೇಷಿ ಎಂದು ಗುರುತಿಸಲಾಗಿದೆ. ಈತ ಭಯೋತ್ಪಾದಕರಿಗೆ ನೆಲೆ ಮತ್ತು ದಾಳಿಗೆ ವಾಹನ ನೆರವು ನೀಡಿದ್ದು, ದಾಳಿಯ ಪ್ರಮುಖ ಸಂಚುಕೋರರಲ್ಲಿ ಒಬ್ಬನಾಗಿದ್ದ ಎಂದು ಎನ್‌ಐಎ ತಿಳಿಸಿದೆ. ಜೈಷ್ ಎ ಮೊಹಮ್ಮದ್ ಭಯೋತ್ಪಾದನಾ ಸಂಘಟನೆ ನಡೆಸಿದ ಈ ದಾಳಿಯಲ್ಲಿ ಐವರು ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮರಾಗಿದ್ದರು. ಭಯೋತ್ಪಾದನಾ ದಾಳಿ ನಡೆಸಿದ ಮೂವರು ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿತ್ತು.