ಜಾರ್ಖಂಡ್‌ನ ಗಿರಿಧ್ ಜಿಲ್ಲೆಯಲ್ಲಿ ಮಾವೋವಾದಿಗಳೊಂದಿಗೆ ಸಿಆರ್‌ಪಿಎಫ್ ಚಕಮಕಿ – ಒಬ್ಬ ಯೋಧ ಹುತಾತ್ಮ ಮೂವರು ಮಾವೋವಾದಿಗಳ ಹತ್ಯೆ.

ಜಾರ್ಖಂಡ್ ರಾಜ್ಯದ ಗಿರಿಧ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್‌ಪಿಎಫ್‌ನ ಓರ್ವ ಯೋದ ಹುತಾತ್ಮನಾಗಿದ್ದು ಮೂವರು ಮಾವೋವಾದಿಗಳು ಹತರಾಗಿದ್ದಾರೆ. ಜಿಲ್ಲೆಯ ಬೆಲ್ಬಾ ಘಾಟ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸಿಆರ್‌ಪಿಎಫ್ ಯೋಧರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಎನ್ ಕೌಂಟರ್ ನಡೆದಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ ೩ ಮಾವೋವಾದಿಗಳ ಶವ ಮತ್ತು ಶಸ್ತ್ರಾಸ್ತ್ರಗಳು ವಶಪಡಿಸಿಕೊಳ್ಳಲಾಗಿದೆ. ಸಿಕ್ಕಿವೆ. ಯೋಧರು ಇನ್ನೂ ಹೆಚ್ಚಿನ ಶಸ್ತ್ರಾಸ್ತ್ರ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.