ಐಪಿಎಲ್ ಕ್ರಿಕೆಟ್-ಬೆಂಗಳೂರಿನಲ್ಲಿ ನಿನ್ನೆ ನಡೆದ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ರ‍್ಸ್‌ಗೆ ೧೭ ರನ್‌ಗಳ ಗೆಲುವು

ಕೋಲ್ಕೊತಾದಲ್ಲಿ ಇಂದು ರಾತ್ರಿ ೮ ಗಂಟೆಗೆ ನಡೆಯಲಿರುವ ಪಂದ್ಯದಲ್ಲಿ ಅಂಕಪಟ್ಟಿಯ ಆರನೇ ಸ್ಥಾನಿ ಕೋಲ್ಕೊತಾ ನೈಟ್ ರೈಡರ್ಸ್ ಮತ್ತು ಕೆಳ ಸ್ಥಾನಿ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ.ಬೆಂಗಳೂರಿನಲ್ಲಿ ಕಳೆದ ರಾತ್ರಿ ನಡೆದ ಐಪಿಎಲ್ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಎಬಿ ಡಿ ವಿಲಿಯರ್ಸ್ ಅವರ ಸಹಾಸದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ೧೭ ರನ್ ಗಳಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ರಾಭವಗೊಳಿಸಿದೆ.ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ ೨೦ ಓವರ್ ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೨೦೨ ರನ್ ಕಲೆಹಾಕಿತು. ಅಬ್ಬರದ ಬ್ಯಾಟಿಂಗ್ ನಡೆಸಿದ ಎಬಿ ಡಿ ವಿಲಿಯರ್ಸ್ ಕೇವಲ ೪೪ ಎಸೆತಗಳಲ್ಲಿ ೩ ಬೌಂಡರಿ, ೭ ಸಿಕ್ಸರ್ ಒಳಗೊಂಡ ಅಜೇಯ ೮೨ ರನ್ ಸಿಡಿಸಿದರು. ಇದಕ್ಕೆ ಪ್ರತಿಯಾಗಿ ಪಂಜಾಬ್ ತಂಡ , ೨೦ ಓವರ್ ಗಳಲ್ಲಿ ೭ ವಿಕೆಟ್ ಕಳೆದುಕೊಂಡು ೧೮೫ ರನ್ ಗಳಿಸಲಷ್ಟೇ ಶಕ್ತಗೊಂಡಿತು.ಆತಿಥೇಯ ಬೆಂಗಳೂರು ತಂಡದ ಪರ ವೇಗಿ ಉಮೇಶ್ ಯಾದವ್ ಗರಿಷ್ಠ ಮೂರು ವಿಕೆಟ್ ಪಡೆದರು. ಸಹಜವಾಗಿಯೇ ಎಬಿ ಡಿ ವಿಲಿಯರ್ಸ್ ಪಂದ್ಯ ಶ್ರೇಷ್ಠ ಗೌರವಕ್ಕೆ ಭಾಜನರಾದರು.