ಬಿಜೆಪಿ ಹಿರಿಯ ನಾಯಕ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದರು. ಹಿರಿಯ ಬಿಜೆಪಿ ನಾಯಕರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಹಿರಿಯ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಕಾಲಿ ದಳದ ಹಿರಿಯ ನಾಯಕ ಹಾಗೂ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಜೆಡಿಯು ಮುಖ್ಯಸ್ಥ ನಿತೀಶ್‌ಕುಮಾರ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಎಲ್‌ಜೆಪಿ ಅಧ್ಯಕ್ಷ ರಾಮ್‌ವಿಲಾಸ್ ಪಾಸ್ವಾನ್ ಸೇರಿದಂತೆ ಎನ್‌ಡಿಎದ ಹಲವಾರು ಪ್ರಮುಖರು ಸಹ ನಾಮಪತ್ರ ಸಲ್ಲಿಕೆ ಕೇಂದ್ರದಲ್ಲಿ ಹಾಜರಿದ್ದರು.

ನರೇಂದ್ರ ಮೋದಿ ಅವರು ವಾರಾಣಸಿ ಕ್ಷೇತ್ರದಿಂದ ಎರಡನೇ ಬಾರಿಗೆ ಲೋಕಸಭೆಗೆ ಆಯ್ಕೆ ಬಯಸಿದ್ದು, ಈ ಕ್ಷೇತ್ರದಲ್ಲಿ ೭ನೇ ಮತ್ತು ಕೊನೆಯ ಹಂತದಲ್ಲಿ ಮುಂದಿನ ತಿಂಗಳ ೧೯ ರಂದು ಮತದಾನ ನಡೆಯಲಿದೆ.